ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ಚುನಾವಣೆಯಿಂದ ಹಿಂದೆ ಸರಿಯುವಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ನೀಡಿದ ಸೂಚನೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ನಾನು ಸ್ಪರ್ಧಿಸಿಯೇ ತೀರುತ್ತೇನೆ ಎಂದಿದ್ದಾರೆ.
ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಹೈಕಮಾಂಡ್ ಸೂಚನೆ ನೀಡಿರುವುದನ್ನು ಒಪ್ಪಿಕೊಂಡ ಶೆಟ್ಟರ್ ಅವರು, ಇಷ್ಟು ದಿನದಿಂದ ಟಿಕೆಟ್ ನೀಡುವ ಭರವಸೆ ನೀಡಿದ್ದ ಪಕ್ಷ ಇದೀಗ ದಿಢೀರ್ ಅಂತ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ಸೂಚಿಸಿದೆ. ಇದನ್ನು ಎರಡು-ಮೂರು ತಿಂಗಳ ಹಿಂದೆ ನನಗೆ ಹೇಳಬೇಕಿತ್ತು. ಆದರೆ, ಇವತ್ತು ಹೇಳಿದ್ದಾರೆ. ಇದು ನನಗೆ ಬಹಳ ಬೇಸರ ತರಿಸಿದೆ. 30 ವರ್ಷ ಪಕ್ಷ ಕಟ್ಟಿದವರಿಗೆ ಹೀಗೆ ಮಾಡಿದ್ದು ಸರಿಯಲ್ಲ. ಹಿರಿಯ ನಾಯಕರಿಗೆ ಗೌರವ ಕೊಡುವ ಕೆಲಸ ಆಗಬೇಕಿದೆ ಎಂದು ಹೇಳಿದ್ದಾರೆ.
ರಾಜಕೀಯ ಜೀವನದಲ್ಲಿ ನನ್ನ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಪಕ್ಷ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ನನ್ನ ಕ್ಷೇತ್ರದ ಜನ ನನ್ನನ್ನು ಅಶೀರ್ವಾದಿಸುತ್ತಾರೆ. ಈ ಬಾರಿಯ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.