ಕೋಝಿಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) : ತಾಮರಸ್ಸೆರಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಮನೆಯ ಬಾವಿಗೆ ಬಿದ್ದು ಶವವಾಗಿ ಪತ್ತೆಯಾಗಿದ್ದಾರೆ. ಮಹಿಳಾ ಲೀಗ್ ಮುಖಂಡರಾದ ಹಾಜಾರ ಕೊಲ್ಲರುಕಂಡಿ (50) ಮೃತರು. ಅವರು ಮನೆಯ ಹಿಂದಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮನೆಯಲ್ಲಿ ಕಾಣೆಯಾದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ನಡೆಸಿದ ಹುಡುಕಾಟದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹಜಾರಾ ಬಾವಿಯಲ್ಲಿ ಪತ್ತೆಯಾಗಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಬಾವಿಯಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು.
ತಾಮರಸ್ಸೆರಿ ಗ್ರಾಮ ಪಂಚಾಯಿತಿಗೆ ಎರಡು ಬಾರಿ ಹಾಜಾರ ಅಧ್ಯಕ್ಷರಾಗಿದ್ದರು. ಅವರು ಕೊಡುವಳ್ಳಿ ಬ್ಲಾಕ್ ಪಂಚಾಯತ್ ಮಾಜಿ ಸದಸ್ಯ ಮತ್ತು ಸಿಎಚ್ ಸೆಂಟರ್ ಸ್ವಯಂಸೇವಕರಾಗಿದ್ದರು. ಮೃತದೇಹವನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇವರ ಪತಿ ದಿವಂಗತ ಕೊಲ್ಲರುಕಂಡಿ ಅಸೈನಾರ್. ಮಕ್ಕಳು ಇಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.