ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಪುತ್ರಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಕಾಗೋಡು ತಿಮ್ಮಪ್ಪ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ಅವಳು ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಡು ಹೋಗಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.