ಪುತ್ತೂರು (www.vknews.in) ; ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ ರವರನ್ನು,ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ,ಶ್ರೀ ಹರೀಶ್ ಕುಮಾರ್ ರವರು ನೇಮಿಸಿದ್ದಾರೆ.
ವಿದ್ಯಾರ್ಥಿ ಕಾಂಗ್ರೆಸ್ ಸಂಘಟನೆ (ಎನ್ ಎಸ್ ಯು ಐ)ಮೂಲಕ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ ನೂರುದ್ದೀನ್ ರವರು, ದ.ಕ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯಾಗಿ, ಕೆಪಿಸಿಸಿ ಅಲ್ಪಸಂಖ್ಯಾತರ ಸಮಿತಿಯ ಉಪಾಧ್ಯಕ್ಷರಾಗಿ,ಸೇವೆ ಸಲ್ಲಿಸಿದ್ದರು. ಪುತ್ತೂರಿನಲ್ಲಿ ನ್ಯಾಯವಾದಿ ಮತ್ತು ನೋಟರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ ಕೆಪಿಸಿಸಿ ಸಂಯೋಜಕರಾಗಿ,ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.