ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಎರಡು ಮಕ್ಕಳ ತಾಯಿಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುಣ್ಯಶ್ರೀ (32) ಮೃತಪಟ್ಟವರು. ಇವರು ಬೆಳ್ತಂಗಡಿ ಪುದುವೆಟ್ಟುವಿನ ಪತಿ ಪುರುಷೋತ್ತಮನ್ ಅವರ ಮನೆಯಿಂದ ಅತ್ತೆ ಮನೆ ಪುತ್ತೂರಿನ ಬೆಟ್ಟಂಬಾಡಿಗೆ ಕೆಲ ದಿನಗಳ ಹಿಂದೆ ಬಂದಿದ್ದರು.
ಪತಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡಿದ ಬಳಿಕ ಚಿಕ್ಕಮ್ಮನಿಗೆ ಕರೆ ಮಾಡಿ ತಾನು ಸಾಯುವುದಾಗಿ ಹೇಳಿದ್ದಳು ಎನ್ನಲಾಗಿದೆ. ಇಬ್ಬರು ಮಕ್ಕಳಿದ್ದಾರೆ. ಬಾವಿಗೆ ಹಾರಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತೀರ್ಮಾನವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಣ ಸ್ಪಷ್ಟವಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.