ಸಂಪಾಜೆ (ವಿಶ್ವ ಕನ್ನಡಿಗ ನ್ಯೂಸ್) : ಸಂಪಾಜೆಯಲ್ಲಿ ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಾರಿನಲ್ಲಿ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಸುತ್ತಿದ್ದು, ಕಾರಿನಲ್ಲಿದ್ದ 3 ಮಕ್ಕಳು, ಎರಡು ಮಹಿಳೆಯರು ಹಾಗು ಒಬ್ಬರು ಪುರುಷ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.