ಮೈಸೂರು (ವಿಶ್ವ ಕನ್ನಡಿಗ ನ್ಯೂಸ್) : ನರೇಂದ್ರ ಮೋದಿಯವರು ರೆಕಾರ್ಡ್ ಬ್ರೇಕ್ ಮಾಡಿದ್ದಾರೆ, ದೇಶದಲ್ಲಿ ಯಾವೊಬ್ಬ ಪ್ರಧಾನಿ ಕೂಡ ಚುನಾವಣೆಗೋಸ್ಕರ ಇಷ್ಟು ಸಮಯ ಕಳೆದಿರಲಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದ ಪ್ರಧಾನಿ ಬಗ್ಗೆ ಅಪಾರ ಗೌರವವಿದೆ. ಆದರೆ ಅವರು ದೇಶದ ಸಮಸ್ಯೆಗಳನ್ನು ಬದಿಗೊತ್ತಿ ಪ್ರಚಾರಕ್ಕೆ ಆದ್ಯತೆ ನೀಡಿದ್ದು ಸರಿಯಲ್ಲ. ಮೋದಿ ರೋಡ್ ಶೋ ಫ್ಯಾಶನ್ ಶೋ ರೀತಿ ಆಗಿದ್ದು, ಅವರು ಅಬ್ಬರಿಸಿ ಬೊಬ್ಬಿರಿದರೂ ಏನು ಪ್ರಯೋಜನ ಆಗುವುದಿಲ್ಲ ಎಂದು ಮೋದಿ ವಿರುದ್ದ ಹೆಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.