ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಳೆದ ಮಾರ್ಚ್ನಲ್ಲಿ ನಡೆದಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ 83.89% ಫಲಿತಾಂಶ ಬಂದಿದ್ದು, ಕಳೆದ ಬಾರಿ ಫಲಿತಾಂಶಕ್ಕೆ ಹೋಲಿಕೆ ಮಾಡಿದ್ರೆ 1.24% ಫಲಿತಾಂಶ ಕಡಿಮೆ ಬಂದಿದೆ.
ಎಂದಿನಂತೆ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದು, ಗ್ರಾಮೀಣ ಭಾಗದ ಮಕ್ಕಳು ನಗರ ಭಾಗದ ಮಕ್ಕಳಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ. 4 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಟಾಪರ್ ಆಗಿದ್ದಾರೆ.
ಬೆಂಗಳೂರಿನ ನ್ಯೂ ಮೆಕಾಲ ಇಂಗ್ಲೀಷ್ ಸ್ಕೂಲ್ ಹೊಸೂರು ರಸ್ತೆ ವಿದ್ಯಾರ್ಥಿನಿ ಭೂಮಿಕಾ ಪೈ, ಬಾಲಗಂಗಾಧರನಾಥ ಹೈಸ್ಕೂಲ್ ಚಿಕ್ಕಬಳ್ಳಾಪುರ ವಿದ್ಯಾರ್ಥಿ ಯಶಸ್ ಗೌಡ, ಕುಮಾರೇಶ್ವರ ಶಾಲೆ ಸವದತ್ತಿ ವಿದ್ಯಾರ್ಥಿನಿ ಅನುಪನಾ ಶ್ರೀಶೈಲ ಹಿರೇಹೋಳಿ, ಆಕ್ಸ್ ಫರ್ಡ್ ಇಂಗ್ಲೀಷ್ ಶಾಲೆ ಮುದ್ದೇಬಿಹಾಳ ವಿದ್ಯಾರ್ಥಿ ಭೀಮನಗೌಡ ಹನುಮಂತಗೌಡ ಪಾಟೀಲ್ ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.