ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದೆ. ಈ ಬಾರಿ ಹಲವು ಗ್ಯಾರಂಟಿ ಘೋಷಣೆ ಮಾಡಿದ ಕಾಂಗ್ರೆಸ್ ಪ್ರಚಾರದ ಕೊನೇ ದಿನವಾದ ಸೋಮವಾರ ಮತ್ತೊಂದು ಗ್ಯಾರಂಟಿ ಘೋಷಿಸಿದೆ.
ಈಗಾಗಲೇ ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂ., ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿಯೊಬ್ಬರಿಗೆ 10 ಕೆಜಿ ಉಚಿತ ಅಕ್ಕಿ, ನಿರುದ್ಯೋಗಿ ಪದವೀಧರರಿಗೆ 3000 ರೂಪಾಯಿ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ, ಆಶಾ ಕಾರ್ಯಕರ್ತೆಯರಿಗೆ 8 ಸಾವಿರ ರೂ. ವೇತನದಂತಹ ಗ್ಯಾರಂಟಿಗಳನ್ನು ಘೋಷಿಸಿದೆ.
ಇದೀಗ ಕೊನೆಯ ದಿನದ ಚುನಾವಣಾ ಪ್ರಚಾರದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮತ್ತೊಂದು ಗ್ಯಾರಂಟಿ ಭರವಸೆಯನ್ನು ಘೋಷಿಸಿದ್ದಾರೆ. ಹೆಣ್ಣುಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನು ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.