ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ದತೆಗಳು ನಡೆಯುತ್ತಿದೆ. ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅವುಗಳಿಗೆ ಪೊಲೀಸ್ ಸಿಬ್ಬಂದಿಯ ಜತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಗಳನ್ನು ನಿಯೋಜಿಸಲಾಗಿದೆ.
ಚುನಾವಣಾ ಭದ್ರತೆಗೆ 304 ಡಿವೈಎಸ್ಪಿಗಳು, 991 ಇನ್ಸ್ಪೆಕ್ಟರ್ಗಳು, 2,610 ಮಂದಿ ಸಬ್ ಇನ್ಸ್ಪೆಕ್ಟರ್ಗಳು, 5,803 ಎಎಸ್ಐಗಳು, 46,421 ಮುಖ್ಯಪೇದೆಗಳು, 27,990 ಮಂದಿ ಹೋಮ್ಗಾರ್ಡ್ಗಳು ಸೇರಿ 84,119 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಅವಶ್ಯಕತೆಗೆ ಅನುಗುಣವಾಗಿ ಅಧಿಕಾರಿಗಳ ಸಿಬ್ಬಂದಿ ಕೊರತೆಯನ್ನು ಸರಿದೂಗಿಸಲು ಹೊರ ರಾಜ್ಯದಿಂದ 8,500 ಪೊಲೀಸ್ ಅಧಿಕಾರಿ ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದರ ಜತೆಗೆ 650 ಸಿಎಪಿಎಫ್ ಕಂಪನಿಗಳ ಜತೆಗೆ ರಾಜ್ಯ ಶಶಸ್ತ್ರ ಮಿಸಲು ಪಡೆಯನ್ನು ನಿಯೋಜಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.