ಲಖನೌ (ವಿಶ್ವ ಕನ್ನಡಿಗ ನ್ಯೂಸ್) : ತೀವ್ರ ವಿವಾದಕ್ಕೆ ಗ್ರಾಸವಾಗಿರುವ ದಿ ಕೇರಳ ಸ್ಟೋರಿ ಚಿತ್ರ ಪ್ರದರ್ಶನಕ್ಕೆ ಪಶ್ಚಿಮ ಬಂಗಾಳದ ಸರ್ಕಾರ ನಿಷೇಧ ಹೇರಿದ ಬೆನ್ನಲ್ಲೇ, ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ್ ಸರ್ಕಾರ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿ ದೀದಿಗೆ ಸಡ್ಡು ಹೊಡೆದಿದ್ದಾರೆ.
ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೇರಳ ಸ್ಟೋರಿ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಚಿತ್ರಕ್ಕೆ ತೆರಿಗೆ ಮುಕ್ತ ಸ್ಥಾನಮಾನ ನೀಡುವುದಾಗಿ ಮಧ್ಯಪ್ರದೇಶ ಸರ್ಕಾರ ಹೇಳಿದ ಕೆಲವೇ ದಿನಗಳಲ್ಲಿ ಸಿಎಂ ಯೋಗಿ ಆದಿತ್ಯಾನಾಥ್ ಈ ಘೋಷಣೆ ಮಾಡಿದ್ದಾರೆ.
ಶುಕ್ರವಾರ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಚಿತ್ರದ ವಿಶೇಷ ಪ್ರದರ್ಶನಕ್ಕೆ ಹಾಜರಾಗಲಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 12 ರಂದು ಲಕ್ನೋದಲ್ಲಿ ತಮ್ಮ ಸಂಪುಟದೊಂದಿಗೆ ಚಿತ್ರದ ವಿಶೇಷ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.