(www.vknews.in) ; ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿ ಮತ್ತು ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ.
ಅಳೇಕಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 100% ಫಲಿತಾಂಶ ಪಡೆದಿದೆ, 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 37 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿರುತ್ತಾರೆ.
ಕಲ್ಲಾಪು ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 100% ಫಲಿತಾಂಶ ಪಡೆದಿದೆ, 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 39 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿರುತ್ತಾರೆ.
ಉಳ್ಳಾಲ ಹಝ್ರತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯು 97.8% ಫಲಿತಾಂಶ ಪಡೆದಿದೆ, 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲೂ, 86 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗಿರುತ್ತಾರೆ.
ಹಳೆಕೋಟೆ ಉರ್ದು ಶಾಲೆ ಶೇ 80%, ಕೋಟೆಪುರ ಟಿಪ್ಪು ಸುಲ್ತಾನ್ ಶಾಲೆ 82%,ಹಾಗೂ ಆಝಾದ್ ನಗರ ಹೆಣ್ಣುಮಕ್ಕಳ ಶಾಲೆಗೆ 68% ಫಲಿತಾಂಶ ಬಂದಿರುತ್ತದೆ.
ಇವರನ್ನು ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಮಿತಿ ಮತ್ತು ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಮತ್ತು ಸಮಿತಿ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.