ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಕರ್ನಾಟಕದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮುಸ್ಲಿಂ ಮೀಸಲಾತಿ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಕರ್ನಾಟಕದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿದ್ದನ್ನು ಬೆಂಬಲಿಸಿದಕ್ಕಾಗಿ ನ್ಯಾಯಾಲಯ ಈ ಹೇಳಿಕೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಬಿ.ವಿ.ನಾಗರತ್ನ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ನ್ಯಾಯಪೀಠ, ಸಾರ್ವಜನಿಕ ಸೇವಕರು ಭಾಷಣ ಮಾಡುವಾಗ ಜಾಗರೂಕರಾಗಿರಬೇಕು ಮತ್ತು ನ್ಯಾಯಾಲಯದ ಮುಂದೆ ಬಾಕಿ ಇರುವ ವಿಷಯಗಳನ್ನು ರಾಜಕೀಯಗೊಳಿಸಬಾರದು ಎಂದು ಹೇಳಿದರು.
ನ್ಯಾಯಾಲಯದ ವ್ಯಾಪ್ತಿಯಲ್ಲಿರುವ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ವಕೀಲ ದುಶ್ಯನ್ ದವೆ ಗಮನಸೆಳೆದರು. ಇಂತಹ ಹೇಳಿಕೆಗಳು ಸೂಕ್ತವಲ್ಲ ಮತ್ತು ನ್ಯಾಯಾಲಯದ ಕಲಾಪಗಳ ಪಾವಿತ್ರ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.