ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವೊಂದು ಕಡೆ ಮುಕ್ತಾಯವಾಗಿದೆ.
ಇತ್ತೀಚಿಗೆ ಬಂದ ಮಾಹಿತಿಯಂತೆ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್. ಸ್ವರೂಪ್ ಬಿಜೆಪಿಯ ಪ್ರೀತಂ ಗೌಡ ವಿರುದ್ಧ ಸುಮಾರು 8 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯಲ್ಲಿ ಕಾಂಗ್ರೆಸ್ ನ ಎನ್.ಟಿ ಶ್ರೀನಿವಾಸ್ 40 ಸಾವಿರ ಮತಗಳ ಅಂತರದಲ್ಲಿ ಗೆದ್ದರೆ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ರಘು ಮೂರ್ತಿ 16 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.