ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ವಿಧಾನಸಭಾ ಚುನಾವಣೆಯ ಮತಎಣಿಕೆಯು ಪ್ರಗತಿಯಲ್ಲಿದ್ದು, ಕೆಲವು ಕ್ಷೇತ್ರಗಳ ಮತಎಣಿಕೆ ಪೂರ್ಣಗೊಂಡಿದೆ. ಇತ್ತೀಚಿಗೆ ಬಂದ ಮಾಹಿತಿಯಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಹಾಲಿ ಸಚಿವ ಸುಧಾಕರ್ ಸೋಲನ್ನು ಅನುಭವಿಸಿದ್ದಾರೆ.
ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆನ್ನ ಭೀಮಣ್ಣ ನಾಯ್ಕ್ ವಿರುದ್ಧ ಹಾಲಿ ಶಾಸಕ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನ್ನು ಅನುಭವಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಹಾಲಿ ಸಚಿವ ಜೆಸಿ ಮಾಧುಸ್ವಾಮಿ ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬು ವಿರುದ್ಧ ಸೋಲನುಭವಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.