ಉಡುಪಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರಸಕ್ತ ಸಾಲಿನ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಮಳೆಗಾಳಿ, ಕಡಲ್ಕೊರೆತ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ಸಂಭವಿಸಬಹುದಾದ ಹಾನಿಗಳನ್ನು ತಡೆಗಟ್ಟಲು ತೆಗೆದುಕೊಳ್ಳಬಹುದಾದ ಮುಂಜಾಗೃತ ಕ್ರಮಗಳ ಕುರಿತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ತಮ್ಮ ಕಚೇರಿಯಲ್ಲಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಆರ್.ಪಿ ನಾಯ್ಕ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ದಿವಾಕರ್ ಖಾರ್ವಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ರಾಜ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಿರಿಯ ಭೂ ವಿಜ್ಞಾನಿ ಅಶ್ವಿನಿ, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಶಾಂತ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಕರಾವಳಿ ಭದ್ರತಾ ಪಡೆಯ ಪೊಲೀಸ್ ನಿರೀಕ್ಷಕಿ ಪುಷ್ಪಾ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.