ತುಮಕೂರು (ವಿಶ್ವ ಕನ್ನಡಿಗ ನ್ಯೂಸ್) : ಟೈಲ್ಸ್ ಅಂಗಡಿ ಮಾಲಿಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಹೊರಹೊಲಯದಲ್ಲಿರುವ ಯಲ್ಲಾಪುರದಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಹತ್ಯೆಗೀಡಾದವರು.
ಎರಡು ತಿಂಗಳ ಹಿಂದೆಯಷ್ಟೇ ಯಲ್ಲಾಪುರದಲ್ಲಿ ಟೈಲ್ಸ್ ಅಂಗಡಿ ತೆರೆದಿದ್ದ ಜಾಕಿರ್, ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದರು. ಟೈಲ್ಸ್ ಅಂಗಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ಮಚ್ಚಿನಿಂದ ಜಾಕಿರ್ ನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಜಾಕೀರ್ ಅವರ ಸಹಾಯಕ ಖಾದರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಶಹಪುರವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.