ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಜನಪ್ರಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲೇ ಇದ್ದಾರೆ. ಇನ್ನು ಮುಂದೆ ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಗೌರವದ ಅಂಗವಾಗಿ ಪುಷ್ಪ, ಶಾಲು ಹೊದಿಸುವುದನ್ನು ಸ್ವೀಕರಿಸುವುದಿಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದರು.
ಜನರು ಈಗ ತಮ್ಮ ಪ್ರೀತಿ ಮತ್ತು ಗೌರವವನ್ನು ತೋರಿಸಲು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು. ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವಾಹನವನ್ನು ಹಾದು ಹೋಗುವಾಗ ಬೇರೆ ವಾಹನಗಳನ್ನು ತಡೆದು ಸಂಚಾರಕ್ಕೆ ಅನಾನುಕೂಲ ಮಾಡದಂತೆ ಸೂಚನೆ ನೀಡಿದ್ದರು.
ಅಲ್ಲದೆ ಝೀರೋ ಟ್ರಾಫಿಕ್ ಪ್ರೋಟೋಕಾಲ್ ಬದಲಾಯಿಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಇತರೆ ವಾಹನಗಳ ತಡೆಯಿಂದ ಜನತೆಗೆ ಆಗುತ್ತಿರುವ ತೊಂದರೆಯನ್ನು ಕಣ್ಣಾರೆ ಕಂಡಿದ್ದರಿಂದ ಈ ಸಲಹೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.