ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ಕೊನೆಗಳಿಗೆಯಲ್ಲಿ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ರಾಷ್ಟ್ರೀಯ ಪ್ರಧಾನ್ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಖಾದರ್ ಅವರಲ್ಲಿ ಮಾತನಾಡಿದ್ದು, ಅಲ್ಪಸಂಖ್ಯಾತರಿಗೆ ಪ್ರಮುಖ ಹುದ್ದೆ ನೀಡಬೇಕು ಎಂಬ ಉದ್ದೇಶದಿಂದ ಸ್ಪೀಕರ್ ರಂತಹ ಪ್ರತಿಷ್ಠಿತ ಹಾಗು ಅತ್ಯಂತ ಜವಾಬ್ದಾರಿಯುತ ಹುದ್ದೆಗೆ ಖಾದರ್ ಅವರೇ ಸೂಕ್ತ ವ್ಯಕ್ತಿ ಎಂದು ಪಕ್ಷ ತೀರ್ಮಾನಿಸಿದೆ.
ಸ್ಪೀಕರ್ ಸ್ಥಾನಕ್ಕೆ ಖಾದರ್ ಒಪ್ಪಿಗೆ ಸೂಚಿಸಿದ್ದು, ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ , ಡಿಸಿಎಂ ಡಿ ಕೆ ಶಿವಕುಮಾರ್ ಅವರ ಜೊತೆಗೂ ಖಾದರ್ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಮಂಗಳವಾರ 11. 30ಕ್ಕೆ ಯು.ಟಿ ಖಾದರ್ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ ಕೆ ಶಿವಕುಮಾರ್ ಅವರು ನಾಮಪತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.