ಭೋಪಾಲ್ (ವಿಶ್ವ ಕನ್ನಡಿಗ ನ್ಯೂಸ್) : ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿದ ಬಳಿಕ ಇಂದೋರ್ನಲ್ಲಿ ಯುವತಿಯೊಬ್ಬರು ತನ್ನೊಂದಿಗೆ ವಾಸಿಸುವ ಯುವಕನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಯುವಕ ತನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದು, ಧರ್ಮ ಬದಲಾಯಿಸುವಂತೆ ಒತ್ತಡ ಹೇರುತ್ತಿದ್ದಾನೆ ಎಂದು ಯುವತಿ ದೂರು ದಾಖಲಿಸಿದ್ದಾಳೆ. ಇದರೊಂದಿಗೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು 23 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಮದುವೆಯಾಗುವುದಾಗಿ ಭರವಸೆ ನೀಡಿ ಆಮಿಷ ಒಡ್ಡಿದ್ದರು ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನಸಿಕವಾಗಿ ಹಿಂಸೆ ನೀಡುತ್ತಿದ್ದು, ಧರ್ಮ ಬದಲಾಯಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಒಟ್ಟಿಗೆ ನೋಡಿದ ಬಳಿಕ ಯುವತಿ ದೂರು ನೀಡಲು ನಿರ್ಧರಿಸಿದ್ದಾಳೆ ಎಂದು ಪೊಲೀಸರನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸಿನಿಮಾ ನೋಡಿ ಇಬ್ಬರ ನಡುವೆ ಜಗಳ ನಡೆದು ಯುವಕ ತನಗೆ ಥಳಿಸಿದ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ. ಆಗ ಯುವಕ ಆಕೆಯನ್ನು ಬಿಟ್ಟು ಹೋಗಿದ್ದಾನೆ. ಬಳಿಕ ಯುವತಿ ಮೇ 19ರಂದು ದೂರು ದಾಖಲಿಸಿದ್ದರು.
ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ಯುವಕ ನಿರುದ್ಯೋಗಿ. ಆದರೆ ದೂರು ನೀಡಿರುವ ಯುವತಿ ವಿದ್ಯಾವಂತ ಮತ್ತು ಖಾಸಗಿ ಕಂಪನಿಯ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಓದುತ್ತಿದ್ದಾಗ ಇಬ್ಬರೂ ಸ್ನೇಹಿತರಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.