ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವ ಘೋಷಣೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಮುಸ್ಲಿಂ ಸಂಘಟನೆ ಮುಖಂಡ ಮೌಲಾನಾ ಅರ್ಷದ್ ಮದನಿ ಆಗ್ರಹಿಸಿದ್ದಾರೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಮಜರಂಗದಳವನ್ನು ನಿಷೇಧಿಸುವುದಾಗಿ ಜನರಿಗೆ ಭರವಸೆ ನೀಡಿತ್ತು. ಈ ಭರವಸೆಯನ್ನು ಕಾಂಗ್ರೆಸ್ ಕೂಡಲೇ ಈಡೇರಿಸಬೇಕು. ಚುನಾವಣಾ ಪತ್ರಿಕೆಯಲ್ಲಿನ ಭರವಸೆಯನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗದಿದ್ದರೆ ಕಾಂಗ್ರೆಸ್ ನ ವಿಶ್ವಾಸಾರ್ಹತೆ ನಾಶವಾಗುತ್ತದೆ ಎಂದು ಅರ್ಷದ್ ಮದನಿ ಭಾಷಣದಲ್ಲಿ ಹೇಳಿರುವುದಾಗಿ ಟೈಮ್ಸ್ ನೌ ವರದಿ ಮಾಡಿದೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ, ಕಾನೂನು ಮತ್ತು ಸಂವಿಧಾನವನ್ನು ಅಪವಿತ್ರ ಗೊಳಿಸುವ ಭಜರಂಗದಳ ಮತ್ತು ಪಿಎಫ್ಐನಂತಹ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದೆ ಎಂದು ಹೇಳಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.