ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕರ್ನಾಟಕ ಸ್ಪೀಕರ್ ಆಗಿ ಮಂಗಳೂರು ಶಾಸಕರಾದ ಯುಟಿ ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಇಲ್ಲದ ಕಾರಣ ಅವಿರೋಧವಾಗಿ ಚುನಾವಣೆ ನಡೆದಿದೆ.
ಖಾದರ್ ಸತತ ಐದನೇ ಬಾರಿಗೆ ಮಂಗಳೂರಿನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಅವರು ಅರೋಗ್ಯ, ಆಹಾರ ಇಲಾಖೆ ಸಚಿವರಾಗಿದ್ದರು. ಕಳೆದ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕನ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.