ಕೊಪ್ಪಳ (ವಿಶ್ವ ಕನ್ನಡಿಗ ನ್ಯೂಸ್) : ಕೊಪ್ಪಳದ ಕುಕನಪಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್ ಮ್ಯಾನ್ ಮೇಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಲ್ಲದೆ, ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿದ ಘಟನೆ ನಡೆದಿದೆ.
ಕಳೆದ ಆರು ತಿಂಗಳಿನಿಂದ ಚಂದ್ರಶೇಖರಯ್ಯ ಎಂಬಾತ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದು ಬಿಲ್ ವಸೂಲಾತಿಗೆಂದು ಲೈನ್ ಮ್ಯಾನ್ ಮಂಜುನಾಥ್ ಎಂಬುವರು ತೆರಳಿದ್ದರು. ಈ ವೇಳೆ ಬಿಲ್ ಪಾವತಿಸುವಂತೆ ಸೂಚಿಸಿದಾಗ ಆತ ನಾನು ಯಾವುದೇ ಕಾರಣಕ್ಕೂ ವಿದ್ಯುತ್ ಬಿಲ್ ಕಟ್ಟುವುದಿಲ್ಲ. ವಿದ್ಯುತ್ ಉಚಿತ ಅಂತ ಹೇಳಿದ್ದಾರೆ ಎಂದು ವಾಗ್ವಾದಕ್ಕೆ ಇಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಿ, ದುರ್ವರ್ತನೆ ತೋರಿದ ಘಟನೆ ನಡೆದಿದೆ.
200 ಯೂನಿಟ್ ಉಚಿತ ಎಂದು ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ವಿದ್ಯುತ್ ಬಿಲ್ ನೀಡುವ ವೇಳೆ ಜನಸಾಮಾನ್ಯರು ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಸುದ್ದಿಗಳು ಕೇಳಿ ಬರುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.