ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿ ಕದಡಿದರೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಬಜರಂಗದಳ, ಆರ್ ಎಸ್ ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಸೇರಿದಂತೆ ರಾಜ್ಯದ ಪ್ರಗತಿಗೆ ಅಡ್ಡಿಯಾಗಿರುವ ಇತರೆ ಕಾನೂನುಗಳನ್ನು ಹಿಂಪಡೆಯಲಿದ್ದೇವೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯ ಇಲ್ಲದಂತೆ ಆಗಿದೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ. ಇದಕ್ಕೆ ನಮ್ಮ ಸರಕಾರ ಕಡಿವಾಣ ಹಾಕಲಿದೆ’ ಎಂದು ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.