ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ ಪೊಲೀಸರು ವಶಕ್ಕೆ ಪಡೆಯಲು ಬಂದಿದ್ದ ವೇಳೆ ಯುವಕನೋರ್ವ 4ನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೊಹಮ್ಮದ್ ಹುಸೇನ್(31) ಮೃತಪಟ್ಟ ಯುವಕ.
ಪ್ರಕರಣವೊಂದರ ಸಂಬಂಧ ಹುಸೇನ್ ರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು. 4ನೇ ಮಹಡಿಯಲ್ಲಿ ವಶಕ್ಕೆ ಪಡೆಯುತ್ತಿದ್ದ ವೇಳೆ ಹುಸೇನ್ ಮಹಡಿಯ ಮೇಲಿಂದ ಬಿದ್ದು ಮೃತಪಟ್ಟಿದ್ದಾರೆ.
ವಶಕ್ಕೆ ಪಡೆಯಲು ಬಂದಿದ್ದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಮೊಹಮ್ಮದ್ ಹುಸೇನ್ ಕುಟುಂಬದವರು ಆರೋಪಿಸಿದ್ದಾರೆ. ಮಹಮ್ಮದ್ ಹುಸೇನ್ ಪೊಲೀಸ್ ವಶದಲ್ಲೇ ಸಾವನ್ನಪ್ಪಿದ್ದಾರೆ ಎಂದು ಬೊಮ್ಮನಹಳ್ಳಿ ಪೊಲೀಸ್ ಸಿಬ್ಬಂದಿ ಮೇಲೆ ಆತನ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿ ಮೇಲೆ ಕೊಲೆ ಪ್ರಕರಣ ದಾಖಲಿಸುವಂತೆ ಕುಟುಂಬ ಆಗ್ರಹಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.