(www.vknews.in) ; ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮoಗಳೂರು ತಾಲೂಕು ಘಟಕ ಮತ್ತು ಸೂರಜ್ ಪದವಿ ಪೂರ್ವ ಕಾಲೇಜು ಮುಡಿಪು ಕುರ್ನಾಡು ಸಹಯೋಗದೊಂದಿಗೆ ಮಂಗಳೂರು ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕವನ ಸ್ಪರ್ದೆ ಕಾರ್ಯಕ್ರಮ ಮತ್ತು ಸಾಹಿತಿ ಬಾಬಾ ಮಜಿಬೈಲು ದತ್ತಿ ಕಾರ್ಯಕ್ರಮ ಸೂರಜ್ ಕಾಲೇಜುಸಭಾಂಗಣದಲ್ಲಿ ನಡೆಯಿತು.
ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಶ್ರೀಮತಿ ವಿಜಯಲಕ್ಷ್ಮಿ ಬಿ.ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಂಜುನಾಥ ಎಸ್.ರೇವಣ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಶ್ರೀ ಗಣೇಶ್ ಪ್ರಸಾದ್ ಜೀ, ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮುರಲೀಮೋಹನ್ ಚೂಂತಾರು ಸ್ವಾಗತಿಸಿದರು. ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧಿಮಾರಿ ಎನ್.ಸುಭ್ರಾಯ ಭಟ್ ಉಪನ್ಯಾಸಗೈದರು. ಸೂರಜ್ ಕಾಲೇಜು ಪ್ರಾಂಶುಪಾಲ ಡಾಲ್ಫಿ ಸಿಕ್ವೇರಾ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.