(ವಿಶ್ವ ಕನ್ನಡಿಗ ನ್ಯೂಸ್) : ನಾನು ಸಚಿವ ಸ್ಥಾನಕ್ಕೆ ಯಾರಿಗೂ ಕಾಲು ಹಿಡಿಯುವುದಿಲ್ಲ. ಸೋನಿಯಾಗಾಂಧಿ ಅವರ ಸೂಚನೆಯಂತೆ ಕೆಲಸ ಮಾಡುತ್ತೇನೆ. ನನ್ನ ರಾಜೀನಾಮೆ ಎಲ್ಲಾ ಸುಳ್ಳು ಎಂದು ವಿಧಾನಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಅವರು ಸುದ್ದಿಗೋಷ್ಠಿ ನಡೆಸಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮೇಲ್ಮನೆ ವಿಪಕ್ಷ ನಾಯಕರನ್ನು, ಸಭಾನಾಯಕರನ್ನ ಮಾಡೊದು ಸಂಪ್ರದಾಯ, ಪದ್ದತಿ ಹಿಂದಿನಿಂದಿಲೂ ಇತ್ತು. ಆ ಸಂಪ್ರದಾಯ ಮುರಿದಿದ್ದಾರೆ. ಸಚಿವ ಸ್ಥಾನ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ನಾನೆಂದೂ ಸಚಿವ ಸ್ಥಾನಬೇಕು ಎಂದು ಕೇಳಿಲ್ಲ. ಪರಿಷತ್ ನಲ್ಲಿ ಸಭಾನಾಯಕರನ್ನಾಗಿ ಯಾರನ್ನ ಮಾಡಬೇಕೆಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರನ್ನೇ ಕೇಳಿ ಎಂದು ಬೇಸರದ ನುಡಿಗಳನ್ನಾಡಿದರು.
ನಾನು ರಾಜೀನಾಮೆ ಕೊಡ್ತೀನಿ ಎಂದು ಎಲ್ಲೂ ಹೇಳಿಲ್ಲ. ಅದೆಲ್ಲ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಬಂದಂತಹ ವಿಷಯ. ನನ್ನ ಪರಮೋಚ್ಛ ನಾಯಕಿ ಸೋನಿಯಾ ಗಾಂಧಿಯವರು ನನ್ನ ಮೇಲೆ ಜವಾಬ್ದಾರಿ ಕೊಟ್ಟು ಪರಿಷತ್ ಸದಸ್ಯತ್ವ ಸ್ಥಾನ ನೀಡಿದ್ದಾರೆ. ಅದನ್ನ ನಿಭಾಯಿಸುತ್ತಿದ್ದೇನೆ. ರಾಜೀನಾಮೆ ನೀಡುವುದಾದರೆ ಸೋನಿಯಾಗಾಂಧಿ ಹಾಗೂ ಸಭಾಪತಿಯವರಿಗೆ ನೀಡುತ್ತೇನೆ. ಸಚಿವ ಸ್ಥಾನ ಇಲ್ಲದಿದ್ದರೂ ನಾನು ಪರಿಷತ್ನಲ್ಲಿ ಸಾಮಾನ್ಯ ಸದಸ್ಯನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.