ಸೌದಿ ಅರೇಬಿಯಾ (ವಿಶ್ವ ಕನ್ನಡಿಗ ನ್ಯೂಸ್) : ಪರ್ಲಡ್ಕ ಮೊಯ್ಯದ್ದೀನ್ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಪರ್ಲಡ್ಕ ಗೋಳಿಕಟ್ಟೆ ನಿವಾಸಿ ಉದ್ಯಮಿ ಹಾರಿಸ್ ಪರ್ಲಡ್ಕ ರವರು ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ನಿವೃತ್ತ ಬ್ಯಾಂಕ್ ಉದ್ಯೋಗಿ ದರ್ಬೆ ಅಬ್ದುಲ್ಲಾ ಹಾಜಿ ರವರ ಮಗ ಹಾಗು ಸೌದಿ ಅರೇಬಿಯಾದ ಉದ್ಯಮಿ ಅಸೀಫ್ ರವರ ಅಣ್ಣ. ಇವರು ಹಲವಾರು ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.