ಬೆಂಗಳೂರು (www.vknews.in) : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಕೇರಳದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಮಲಪ್ಪುರಂನ ನಿಲಂಪುರದ ಅನೈಕ್ಕಲ್ ನಿವಾಸಿ ನಿತಿನ್ (21) ಮತ್ತು ತಿರುವನಂತಪುರದ ನೆಡುಮಂಗಡ ಮೂಲದ ಶಾಹಿನ್ ಶಹಜಹಾನ್ (21) ಎಂದು ಗುರುತಿಸಲಾಗಿದೆ.
ಮೈಸೂರು ಫಿಶ್ ಲ್ಯಾಂಡ್ ಬಳಿ ಅವರು ಪ್ರಯಾಣಿಸುತ್ತಿದ್ದ ಬೈಕ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಇಬ್ಬರೂ ಮೈಸೂರು ಕಾವೇರಿ ಕಾಲೇಜಿನಲ್ಲಿ ಮೂರನೇ ವರ್ಷದ ಫಿಸಿಯೋಥೆರಪಿ ವಿದ್ಯಾರ್ಥಿಗಳು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.