ಕುಷ್ಟಗಿ (ವಿಶ್ವ ಕನ್ನಡಿಗ ನ್ಯೂಸ್) : ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಮೃತಪಟ್ಟವರು.
ವಿಜಯಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು, ಅಪಘಾತದ ತೀವ್ರತೆಗೆ ಸಂಪೂರ್ಣ ಲಾರಿಯ ಅಡಿಭಾಗದಲ್ಲಿ ಸಿಕ್ಕಿಕೊಂಡಿದ್ದು, ಸ್ಥಳೀಯರು ಹಾಗೂ ಪೊಲೀಸರು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.