ಮೈಸೂರು (www.vknews.in) | ಮೈಸೂರು ಜಿಲ್ಲೆಯ ಕೊಳ್ಳೇಗಾಲ-ಟಿ.ನರಸೀಪುರ ರಸ್ತೆಯಲ್ಲಿ ಕಾರು ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇನ್ನೋವಾ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಕಾರಿನಲ್ಲಿ 13 ಪ್ರಯಾಣಿಕರಿದ್ದರು ಮತ್ತು ಅವರನ್ನು ಹೊರತೆಗೆಯುವ ವೇಳೆಗೆ 10 ಮಂದಿ ಮೃತಪಟ್ಟಿದ್ದರು ಎಂದು ಮೈಸೂರು ಎಸ್ಪಿ ಸೀಮಾ ಲಡ್ಕರ್ ತಿಳಿಸಿದ್ದಾರೆ. ಪ್ರಯಾಣಿಕರು ಚಾಮುಂಡಿ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದರು. ಗಾಯಗೊಂಡವರನ್ನು ಜನಾರ್ದನನ್ (4), ಪುನೀತ್ (24) ಮತ್ತು ಶಶಿಕುಮಾರ್ (45) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.