ಮಂಗಳೂರು (www.vknews.in) : ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಬುಧವಾರ ಬೆಳ್ಳಂಬೆಳಿಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಲಾಗಿದೆ.ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ NIA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮಾರ್ಚ್ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ದಾಳಿ ನಡೆಸಿದ್ದರು. ವಿಧ್ವಂಸಕ ಕೃತ್ಯ ಎಸಗಲು ಹಣಕಾಸಿನ ನೆರವು ಒದಗಿಸಿರಬಹುದು ಎಂಬ ಗುಮಾನಿಯ ಮೇರೆಗೆ ಬಂಟ್ವಾಳ ಮೂಲದ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಎಂಬ ನಾಲ್ವರ ಮನೆ ಮೇಲೆ ದಾಳಿ ಮಾಡಿ ಬಂಧಿಸಿದ್ದರು.
ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವಿಫಲಗೊಳಿಸಲು ಸಂಚು ನಡೆಸಿರುವವರ ಜೊತೆ ಈ ನಾಲ್ವರು ಸಂಪರ್ಕ ಹೊಂದಿದ್ದು, ಹಣಕಾಸು ನೆರವು ಒದಗಿಸಿದ್ದಾರೆ ಎಂಬ ಆರೋಪದಡಿ ದಾಳಿ ನಡೆದಿತ್ತು. ಕೃತ್ಯಕ್ಕೆ ಸಂಬಂಧಿಸಿದಂತೆ ವಿವಿಧ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವೂ ಸಹ ಇವರ ಮೇಲಿದೆ ಎಂದು ಹೇಳಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.