ಬೆಳ್ತಂಗಡಿ (www.vknews.in) : ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಯತ್ (24) ಮೃತಪಟ್ಟವರು.
ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದು, ಸದ್ಯ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದವರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಅಲ್ಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.
ಇವರು ರಾಷ್ಟ್ರ ಮಟ್ಟದಲ್ಲಿ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಶನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.