ಚೆನ್ನೈ (ವಿಶ್ವ ಕನ್ನಡಿಗ ನ್ಯೂಸ್) : ಚೆನ್ನೈ ಸೂಪರ್ ಕಿಂಗ್ಸ್ ಗೆದ್ದು ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾ ಮಲೈ ಹೇಳಿದ ಮಾತು ವ್ಯಾಪಕ ಟೀಕೆಗೆ ಕಾರಣವಾಗಿದೆ.
ಚೆನ್ನೈ ಜಯದ ಬಗ್ಗೆ ಮಾತನಾಡಿದ ಅಣ್ಣಾಮಲೈ, ಜಡೇಜಾ ಬಿಜೆಪಿ ಕಾರ್ಯಕರ್ತ ಮತ್ತು ಅವರು ಗುಜರಾತ್ ಮೂಲದವರು. ಅವರ ಪತ್ನಿ ಬಿಜೆಪಿ ಶಾಸಕಿ. ತಮಿಳಿಗನಾಗಿ ನನಗೂ ಹೆಮ್ಮೆ ಇದೆ. ಸಿಎಸ್ ಕೆಗಿಂತ ಜಿಟಿಯಲ್ಲಿ ಹೆಚ್ಚು ತಮಿಳು ಆಟಗಾರರಿದ್ದರು ಎಂದು ಹೇಳಿದ್ದಾರೆ.
ರವೀಂದ್ರ ಜಡೇಜಾ ಎಲ್ಲಿಯೂ ಬಿಜೆಪಿಗೆ ಬಹಿರಂಗವಾಗಿಯೇ ಬೆಂಬಲ ಸೂಚಿಸಿಲ್ಲ. ಆದರೆ ಅವರ ಪತ್ನಿ 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿ 2022ರ ಚುನಾವಣೆಯಲ್ಲಿ ಜಾಮ್ ನಗರ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಅಣ್ಣಾಮಲೈ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ, ಹಾಗು ಟೀಕೆ ವ್ಯಕ್ತವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.