ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಮಾನಸಿಕವಾಗಿ ಕಿರುಕುಳ ನೀಡಿದ್ದಲ್ಲದೇ, ವರದಕ್ಷಿಣೆ ತರುವಂತೆ ಹಲ್ಲೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ. ಮಾರ್ನಮಿಕಟ್ಟೆಯ ಅಪಾರ್ಟ್ಮೆಂಟ್ವೊಂದರ ನಿವಾಸಿಗಳಾದ ಮುಹಮ್ಮದ್ ಹುಸೇನ್ ಹಾಗೂ ಆತನ ಹೆತ್ತವರ ಮೇಲೆ ಪತ್ನಿ ಶಬಾನಾ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೋಳಾರ ಸಮೀಪದ ಮುಳಿಹಿತ್ಲು ನಿವಾಸಿ ಶಬಾನಾ ಅವರಿಗೆ ಹುಸೇನ್ ಜೊತೆಗೆ ಆರು ತಿಂಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ 8 ದಿನಗಳಲ್ಲಿ ನಾನು ಕಷ್ಟದಲ್ಲಿದ್ದೇನೆ ಎಂದು ಹೇಳಿ ಹುಸೇನ್ ಚಿನ್ನಾಭರಣಗಳನ್ನು ಕೊಂಡೊಯ್ದಿದ್ದ. ಬಳಿಕ ಶಬಾನಾಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಅಲ್ಲದೆ ಶಬನಾ ಗರ್ಭಿಣಿಯಾದಾಗ ಮಗು ಬೇಡ ಎಂದು ಮಾತ್ರೆ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ. ಬೇರೆ ಹೆಂಗಸರ ಜೊತೆಗಿನ ಸಂಬಂಧದ ಬಗ್ಗೆ ಪ್ರಶ್ನಿಸಿದಾಗ ನಿಂದಿಸಿ ಕಿರುಕುಳ ನೀಡಿದ್ದಾನೆ ಮತ್ತು ವರದಕ್ಷಿಣೆ ತರುವಂತೆ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.