ಭೋಪಾಲ್ (www.vknews.in) ; ಕಾರು ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ನವವಿವಾಹಿತರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ದಾರುಣ ಅಂತ್ಯ ಕಂಡಿದ್ದಾರೆ. ಮೃತರನ್ನು ಚರ್ಖೇಡಾ ಗ್ರಾಮದ ಅಖಿಲೇಶ್ ಕುಶ್ವಾಹ, ಗೋಲು ಚೌಧರಿ, ರಾಕೇಶ್ ಕುಶ್ವಾಹ ಮತ್ತು ಅವರ ಪತ್ನಿ ಶಿವಾನಿ ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದರೂ ಯಾರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತು ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.