ಪುಟ್ಟನಾಥನಿ (www.vknews.in) : ಶಿಕ್ಷಕಿಯೊಬ್ಬರು ಮನೆಯೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಚೇರೂರಲ್ ಎಡತ್ತಡಂನಲ್ಲಿ ಸಾಕೀರ್ ಅವರ ಪತ್ನಿ ಜಾಸಿಯಾ (46) ಮೃತ ದುರ್ದೈವಿ. ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
ಗ್ಯಾಸ್ ಸಿಲಿಂಡರ್ ನಿಂದ ಬೆಂಕಿ ತಗುಲಿ ಸುಟ್ಟ ಗಾಯವಾಗಿರುವ ಶಂಕೆ ವ್ಯಕ್ತವಾಗಿದೆ. ಜಾಸಿಯಾ ಚೇರೂರಲ್ ಪ್ರೌಢಶಾಲೆಯಲ್ಲಿ ಶಿಕ್ಷಕಿ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.