ಮಂಜೇಶ್ವರ (www.vknews.in) : ಉಳ್ಳಾಲ ಬೀಚ್ ನಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಅಮಾನುಷವಾಗಿ ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಎಸ್.ಡಿ.ಪಿ.ಐ ನಿಯೋಗ ಭೇಟಿ, ಆರೋಗ್ಯ ವಿಚಾರಿಸಿದ್ದಾರೆ.
ಮಂಜೇಶ್ವರಂ ಕ್ಷೇತ್ರಾಧ್ಯಕ್ಷ ಅಶ್ರಫ್ ಬಡಾಜೆ, ಘಟಕದ ಕಾರ್ಯದರ್ಶಿ ಶರೀಫ್ ಪಾವೂರ್ ಮತ್ತು ನೌಫಲ್ ಚಿಗುರುಪಾದೆ ಭೇಟಿ ಮಾಡಿದರು. ವಿದ್ಯಾರ್ಥಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪ್ರಶ್ನಿಸಿ ಆಕ್ರಮಣ ನಡೆಸಿದ ಎಲ್ಲ ಆರೋಪಿಗಳನ್ನು ಬಂಧಿಸಿ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್.ಡಿ.ಪಿ.ಐ ನೇತಾರರು ಆಗ್ರಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.