ಚಾಮರಾಜನಗರ (www.vknews.in) : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವನ್ಯ ಜೀವಿ ಅರಣ್ಯ ವಲಯದಲ್ಲಿ ಜಿಂಕೆ ಬೇಟೆಯಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಕುಣಗಳ್ಳಿ ಗ್ರಾಮದ ಮೂರ್ತಿ ಹಾಗೂ ರಾಮು ಬಂಧಿತ ಆರೋಪಿಗಳು.
ಜಿಂಕೆಯನ್ನು ಬೇಟೆಯಾಡಿ ಕೊಂದು ಅದರ ಮಾಂಸ ಕತ್ತರಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗಿದ್ದ ಇತರ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ನಾಡ ಬಂದೂಕು ಬಳಸಿ ಐವರು ಆರೋಪಿಗಳು ಜಿಂಕೆ ಬೇಟೆಯಾಡುತ್ತಿದ್ದ ಸಂದರ್ಭ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೇ ಬಂಧಿತರಿಂದ ನಾಲ್ಕು ಚಾಕು, ಎರಡು ಮೊಬೈಲ್, ಮೂರು ಬೈಕ್ ಹಾಗೂ 35 ಕೆಜಿ ಜಿಂಕೆ ಮಾಂಸ ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಮೂವರು ಆರೋಪಿಗಳ ಬಂಧನಕ್ಕೆ ಅರಣ್ಯಾಧಿಕಾರಿಗಳು ಬಲೆ ಬೀಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.