ಸುಳ್ಯ (ವಿಶ್ವ ಕನ್ನಡಿಗ ನ್ಯೂಸ್) : ಹಿಂದೂ ಸಮಾಜದ ಶಕ್ತಿಯನ್ನು ಇಡೀ ಜಗತ್ತಿಗೆ ತೋರಿಸುವ ನಿಟ್ಟಿನಲ್ಲಿ ಆರ್ ಎಸ್ಎಸ್ ಇಂದು ಕೆಲಸ ಮಾಡುತ್ತಿದೆ, ಹಿಂದೂ ಸಮಾಜದ ಮೇಲೆ ದಬ್ಬಾಳಿಕೆ, ದೌರ್ಜನ್ಯಗಳ ನಡೆದರೆ ಹಿಂದೂ ಸಮಾಜ ಅದಕ್ಕೆ ತಕ್ಕ ಉತ್ತರ ನೀಡಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.
ಅಡ್ಯಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ಲೋಕಕಲ್ಯಾಣಾರ್ಥವಾಗಿ ನಡೆದ ಶ್ರೀ ಸತ್ಯನಾರಾಯಣ ಪೂಜೆಯ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾಕಿ ವ್ಯವಸ್ಥೆಯಡಿ ದೌರ್ಜನ್ಯ ಎಸಗಬೇಡಿ. ಧಾರ್ಮಿಕ ವ್ಯವಸ್ಥೆ ಮತ್ತು ರಾಷ್ಟ್ರೀಯ ವಿಚಾರಧಾರೆಯಲ್ಲಿ ಕೆಲಸ ಮಾಡುವ ಹಿಂದೂ ಸಮಾಜದ ಕಾರ್ಯಕರ್ತರು ಬೀದಿ ಹೆಣವಾಗುತ್ತಿದ್ದಾರೆ, ಹಿಂದುತ್ವಕ್ಕಾಗಿ ಪ್ರಾಣ ತ್ಯಾಗಕ್ಕೂ ನಾನು ಸಿದ್ಧನಿದ್ದೇನೆ, ಸತ್ಯನಾರಾಯಣ ಪೂಜೆಯಂತಹ ಧಾರ್ಮಿಕ ಕಾರ್ಯಕ್ರಮಗಳು ಹಿಂದೂ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.