(www.vknews.in) ; ಅಧಿಕಾರ ಇಂದು ಇರುತ್ತೆ, ಹೋಗುತ್ತೆ. ಆದರೆ ನಮ್ಮ ನಿಮ್ಮ ವಿಶ್ವಾಸ ಮುಖ್ಯ. ನೀವು ನಮ್ಮ ಮೇಲೆ ಇಟ್ಟಿರುವ ಈ ವಿಶ್ವಾಸ ಮುಂದೆಯೂ ಇರಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ, ಗಣಿ, ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರೂ ಆದ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ನಗರದ ಜಯದೇವ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರರಾದ ಟಿ.ಶಿವಕುಮಾರ್ ರವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಮಂತ್ರಿಯಾಗಿ ನಗರಕ್ಕೆ ಮೊದಲ ಬಾರಿಗೆ ಬಂದ ನನಗೆ ವಿವಿಧ ಭಾಗಗಳಿಂದ ಬಂದು ಆಶೀರ್ವದಿಸಿದ್ದೀರಿ. ಶುಭಾಶಯ ಕೋರಿದ್ದೀರಿ, ನಿಮ್ಮೆಲ್ಲರಿಗೂ ತುಂಬು ಹೃದಯದಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ದಾವಣಗೆರೆ, ಉತ್ತರ, ದಕ್ಷಿಣ ಸೇರಿದಂತೆ ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಬರಲು ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಉತ್ಸಾಹ, ಕಾರ್ಯಕರ್ತರ ಶ್ರಮ ಕಾರಣ ಎಂದು ಶ್ಲಾಘಿಸಿದರು. ಮುಖ್ಯಮಂತ್ರಿಗಳು ಚುನಾವಣಾ ಪೂರ್ವದಲ್ಲಿ ಹೇಳಿದ್ದ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ, ಕಾಂಗ್ರೆಸ್ ಎಂದಿಗೂ ಬಡವರ ಪಕ್ಷ ಎಂದರು.
ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಯಾವ ರೀತಿ ದುರಾಡಳಿತ ನಡೆಸಿದೆ ಎಂಬುದನ್ನು ಎಲ್ಲರೂ ನೋಡಿದ್ದೇವೆ. ಪಾಲಿಕೆ, ದೂಡಾ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ದುರಾಡಳಿತದಿಂದ ಬಿಜೆಪಿ ಅಧಿಕಾರ ನಡೆಸಿದೆ. ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿದೆ. ಇನ್ನು ಮುಂದೆ ನಾವು ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕಿದೆ ಎಂದರು.
ಮುಂದಿನ ವರ್ಷ ಲೋಕಸಭಾ ಚುನಾವಣೆ ಬರಲಿದೆ. ಅದಕ್ಕಾಗಿಯೂ ಹೋರಾಟ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಾಕಿಕೊಂಡು ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ತಂದು ಅಭಿವೃದ್ಧಿಗೆ ಸಹಕರಿಸೋಣ ದಾವಣಗೆರೆ ಜಿಲ್ಲೆ ಎಂದರೆ ಕಾಂಗ್ರೆಸ್ ಜಿಲ್ಲೆ ಎನ್ನುವಂತೆ ಹೋರಾಟ ನಡೆಸೋಣ, ನಗರ ಹಾಗೂ ಜಿಲ್ಲೆಯನ್ನು ಅಭಿವೃದ್ಧಿ ಪಡಿಸಲು ಶ್ರಮಿಸೋಣ ಎಂದು ಪಕ್ಷದ ಕಾರ್ಯಕರ್ತರಲ್ಲಿ ಮತದಾರರಲ್ಲಿ ಮನವಿ ಮಾಡಿದರು_
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.