(www.vknews.in) : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದ ಯುವಕ ಸೇರಿದಂತೆ ನಾಲ್ವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಎಂ ಸ್ಯಾಂಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿಸಿದ್ದಾರೆ. ನಾಗಮಂಗಲ ತಾಲ್ಲೂಕು ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತಿರುಮಲಾಪುರ ಗ್ರಾಮದ ಬಳಿ ಭಾನುವಾರ ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ನ ಜನರಲ್ ಮ್ಯಾನೇಜರ್ ಮಂಜಪ್ಪ ರವರ ಪುತ್ರ ಧೀರಜ್(24) ಮತ್ತು ಮಾಗಡಿ ತಾಲ್ಲೂಕು ಲಕ್ಕೇನಹಳ್ಳಿ ಗ್ರಾಮದ ಹೇಮಂತ್ (24), ಶರತ್ (28) ನವೀನ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.