ಶ್ರೀನಿವಾಸಪುರ ( ವಿಶ್ವ ಕನ್ನಡಿಗ ನ್ಯೂಸ್ ): ಕೋಲಾರ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರವರು ಜೂನ್ 07 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಶ್ರೀನಿವಾಸಪುರ ತಾಲ್ಲೂಕು ಮಟ್ಟದ ಸಭೆಯನ್ನು ಶ್ರೀನಿವಾಸಪುರ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಿದ್ದಾರೆ.
ಸರ್ಕಾರಿ ಕಛೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ / ನಿರ್ಲಕ್ಷ್ಯ ಅಥವಾ ಸದರಿ ಅಧಿಕಾರಿ / ಸಿಬ್ಬಂದಿಯು ದುರಾಡಳಿತದಲ್ಲಿ ತೊಡಗಿದ್ದಲ್ಲಿ ಅಂತಹ ಅಧಿಕಾರಿ / ಸಿಬ್ಬಂದಿಗಳ ಮೇಲೆ ಲಿಖಿತ ಅಹವಾಲುಗಳನ್ನು ಸ್ವೀಕರಿಸಲಿದ್ದು , ಸಾರ್ವಜನಿಕರು ದೂರುಗಳಿದ್ದಲ್ಲಿ ಸದರಿ ದಿನಾಂಕದಂದು ಲಿಖಿತ ದೂರುಗಳನ್ನು ದ್ವಿಪ್ರತಿಯಲ್ಲಿ ನೀಡಬಹುದು ಎಂದು ಪೊಲೀಸ್ ಅಧೀಕ್ಷಕರು , ಕರ್ನಾಟಕ ಲೋಕಾಯುಕ್ತ , ಕೋಲಾರ ರವರು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.