ಧಾರವಾಡ (www.vknews.in) : ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಸಹೋದರಿಯರು ಮನೆಯಲ್ಲಿ ತಾಯಿ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ಪಟ್ಟಣದಲ್ಲಿ ನಡೆದಿದೆ. ಅಕ್ಕ, ತಂಗಿ ಇಬ್ಬರು ಒಂದೇ ಸೀರೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕಾವೇರಿ ಹಡಪದ (19) ಹಾಗೂ ಭೂಮಿಕಾ ಹಡಪದ (17) ಎಂಬುವರೇ ಆತ್ಮಹತ್ಯೆಗೆ ಶರಣಾದ ಸಹೋದರಿಯರು. ಈ ಬಗ್ಗೆ ಕಲಘಟಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ತನಿಖೆ ನಂತರ ಆತ್ಮಹತ್ಯೆಗೆ ಕಾರಣ ಏನು ಎಂದು ತಿಳಿದುಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.