(www.vknews.in) ; ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ವಿವಿಧ ಗಿಡಗಳನ್ನು ನೆಡುವ ಮೂಲಕ ಪರಿಸರಸ್ನೇಹಿ ಚಟುವಟಿಕೆಗಳಲ್ಲಿ ಭಾಗಿಯಾದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನಗಳನ್ನು ವಿತರಿಸಲಾಯಿತು.
ಪರಿಸರ ದಿನದ ಅಂಗವಾಗಿ ಸಿಹಿ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆ, ಎಸ್. ಡಿ . ಎಂ. ಸಿ. ಅಧ್ಯಕ್ಷರಾದ ದಿನಕರ ಸಣ್ಣಮನೆ ರವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.