ಚಿತ್ರದುರ್ಗ (www.vknews.in) : ನಗರದ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಯೋರ್ವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಿಪಿಐ ಲಿಂಗರಾಜ್ (39) ಮೃತಪಟ್ಟವರು. ಬೆಂಗಳೂರಿನಲ್ಲಿ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದ ಲಿಂಗರಾಜ್ ಅವರು ಬುಧವಾರ ಬೆಂಗಳೂರಿಂದ ಚಿತ್ರದುರ್ಗಕ್ಕೆ ಆಗಮಿಸಿ ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು.
ಬೆಳಗ್ಗೆ ಎದೆನೋವು ಎಂದು ಆಸ್ಪತ್ರೆಗೆ ತೆರಳುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ. ಲಿಂಗರಾಜ್ ಅವರು ಹಿಂದೆ PSI ಆಗಿ ಚಿತ್ರದುರ್ಗದಲ್ಲಿ ಸೇವೆ ಸಲ್ಲಿಸಿದ್ದರು.ಕೆಲವು ವರ್ಷಗಳ ಹಿಂದೆ ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯಲ್ಲಿ ಎಸ್.ಐ ಆಗಿ ಸೇವೆ ಸಲ್ಲಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.