ಕುಂದಾಪುರ (www.vknews.in) : ಕೋಟೇಶ್ವರ ಸಮೀಪದ ವಕ್ವಾಡಿಯಲ್ಲಿ ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುವ ವೇಳೆ ರಸ್ತೆಯಲ್ಲಿ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ ಯುವಕನಿಗೆ ವಿದ್ಯಾರ್ಥಿನಿ ಚಪ್ಪಲಿ ಏಟು ನೀಡಿದ ಘಟನೆ ನಡೆದಿದೆ. ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ನಜೀರ್(35) ಆರೋಪಿ ಎಂದು ಹೇಳಲಾಗಿದೆ.
ನಜೀರ್ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದು, ಕೂಡಲೇ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಸ್ಥಳೀಯರೆಲ್ಲ ಸೇರಿ, ವಿಚಾರಿಸಿದಾಗ ನಡೆದ ಘಟನೆಯನ್ನು ಆಕೆ ವಿವರಿಸಿದ್ದಾಳೆ. ಈ ವೇಳೆ ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು, ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.