ಬಂಟ್ವಾಳ (www.vknews.in) : ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ದೇವರ ಮನೆ ರಸ್ತೆ ತಿರುವು ಬಳಿಯ ನಿರ್ಜನ ಪ್ರದೇಶದಲ್ಲಿ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ತೆಯಾದ ಮೃತದೇಹವನ್ನು ಇರಾ ಗ್ರಾಮದ ಕುಕ್ಕಾಜೆ – ಕಾಪಿಕಾಡ್ ನಿವಾಸಿ ದಿವಂಗತ ಅಬ್ಬಾಸ್ ಎಂಬವರ ಪುತ್ರ ಸವಾದ್ (35) ಎಂದು ತಿಳಿದುಬಂದಿದೆ.
10 ದಿನಗಳಿಂದ ಕಾಣೆಯಾಗಿದ್ದ ಮೃತ ಸವಾದ್, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬಂದಿದ್ದ, ಹಾಗಾಗಿ ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದು ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿದ್ದಾರೆ.
ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಣಕಲ್ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.