ಮಂಗಳೂರು (www.vknews.in) : ಉಪ್ಪಿನಂಗಡಿ ಬಳಿ ವಾರದ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿದ್ದ ಬೈಕ್ ಸವಾರ ಅನೀಸ್ (27) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೂನ್ 2 ರಂದು ಬೆಳಿಗ್ಗೆ 9.15 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿ ಬಳಿಯ ಪಂಜಳ ಎಂಬಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು.
ಬೈಕ್ ನಲ್ಲಿದ್ದ ಅನೀಸ್ ಮತ್ತು ಅವರ ಮಾವ ಹಮೀದ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು. ತೀವ್ರ ಗಾಯಗೊಂಡು ಕೋಮಾಗೆ ಜಾರಿದ್ದ ಅನೀಸ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅನೀಸ್ ಅಸುನೀಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.