ಆನೇಕಲ್ (www.vknews.in) : ಆಸ್ತಿಗಾಗಿ ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಮಾಡಿ ಎಸೆದು ಪರಾರಿಯಾಗಿರುವ ಘಟನೆ ಆನೇಕಲ್ ಉಪವಿಭಾಗದ ಬನ್ನೇರುಘಟ್ಟ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಬೈನಲ್ಲಿ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈ ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಗೀತಾ (54) ಎಂದು ಗುರುತಿಸಲಾಗಿದೆ. ಆರೋಪಿಗಳ ಪೈಕಿ ಇಂದಲ್ ಕುಮಾರ್ (21) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಜೂನ್ 1ರಂದು ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ತನಿಖೆ ಕೈಗೊಂಡಿದ್ದ ಬನ್ನೇರುಘಟ್ಟ ಪೊಲೀಸರು ಹಂತಕರನ್ನು ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಿತ್ತು. ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಓರ್ವನನ್ನ ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.